69. ಪೆನ್ ರಿಪೇರಿಯ ಉಮ್ಮರ್ ಸಾಹೇಬರು
ಆತ್ಮೀಯರೇ, ಫೆಬ್ರವರಿ ತಿಂಗಳ ಈ ಸಂಚಿಕೆಯಲ್ಲಿ ಹಳೆಯ ನೆನಪು ಮತ್ತು ಮರೆತುಹೋಗಿರುವ ಒಂದು ವೃತ್ತಿಯ ಬಗೆಗಿನ ವಿವರಗಳಿವೆ. ನಿಜ, ಕಳೆದುಹೋದ ಕಾಲ ಮತ್ತು ನಡೆಸಿದ ಜೀವನಕ್ರಮಗಳು ಇಂದು ಮರಳಿ ಬಾರದಿರಬಹುದು. ಆದರೆ ಸಾಗಿಬಂದ ದಾರಿಯನ್ನು ತಿರುಗಿನೋಡುವ ಪರಿಪಾಠ ನಮ್ಮನ್ನು ಇನ್ನಷ್ಟು ಗಟ್ಟಿಗೊಳಿಸಲು ನೆರವಾಗುತ್ತದೆ. ಪೆನ್ ರಿಪೇರಿಯಂಥ ಚಿಕ್ಕ ಕೌಶಲವನ್ನೇ ವೃತ್ತಿಯನ್ನಾಗಿಸಿ ಜೀವನ ನಡೆಸಿದ, ಅಜ್ಜಂಪುರದ ಪೇಟೆ ಬೀದಿಯಲ್ಲಿ ತುಂಬ ಪರಿಚಿತರಿದ್ದ ವ್ಯಕ್ತಿ ಶೇಖ್ ಉಮ್ಮರ್ ಸಾಬ್ ರನ್ನು ನೆನಪಿಸಿಕೊಂಡು ಮಿತ್ರ ಅಪೂರ್ವ ಬಸು ತಮ್ಮ ನೆನಪುಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ. ಇಂಥ ನೆನಪುಗಳ ಸಂಗ್ರಹ ಊರಿನಲ್ಲಿರುವವರ, ಅಜ್ಜಂಪುರದ ಸ್ಥಳೀಕರ ಸಂಗ್ರಹಗಳಲ್ಲಿ ಇರಬಹುದು. ಅವನ್ನು ಲೇಖನ ರೂಪದಲ್ಲಿ ಇಲ್ಲಿ ಹಂಚಿಕೊಳ್ಳಲು ಮುಕ್ತ ಅವಕಾಶವಿದೆ. ಹಾಗೆ ಮಾಡುವಿರೆಂದು ಆಶಿಸುತ್ತೇನೆ. - ಶಂಕರ ಅಜ್ಜಂಪುರ ----------------------------------------------------------------------------------------------------------------------------------------------------------------------------------------------- ಚಿತ್ರಗಳು, ಲೇಖನ ಅಪೂರ್ವ ಬಸು, ಅಜ್ಜಂಪುರ ಅಜ್ಜಂಪುರದ ಪೇಟೆ ಭಾಗವು ಊರು ಬೆಳೆದಂತೆಲ್ಲ ಅದರ ಕುರುಹೂ ಉಳಿಯದಂತೆ ಬದಲಾಗಿಹೋಗಿರುವುದನ್ನು ಕಾಲಧರ್ಮ ಎಂದು ಕರೆಯಬೇಕಲ್ಲದೆ...